ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ದೆಹಲಿ ಮಹಿಳಾ ಆಯೋಗದ ಅಂದಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ನಿಯಮಗಳಿಗೆ ವಿರುದ್ಧವಾಗಿ ಹೆಚ್ಚುವರಿ ನೌಕರರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
‘ಮಹಿಳಾ ಆಯೋಗಕ್ಕೆ 40 ಜನರನ್ನು ನೇಮಿಸಿಕೊಳ್ಳಲಷ್ಟೇ ಅಧಿಕಾರವಿದೆ. ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ಇಲ್ಲದೆ 223 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಅಧಿಕಾರ ಆಯೋಗಕ್ಕೆ ಇಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
‘ಹಣಕಾಸು ಇಲಾಖೆಯ ಅನುಮೋದನೆಯಿಲ್ಲದೆ ಸರ್ಕಾರಕ್ಕೆ ಹೆಚ್ಚುವರಿ ವೆಚ್ಚವನ್ನು ಉಂಟುಮಾಡುವ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಆಯೋಗಕ್ಕೆ ತಿಳಿಸಲಾಗಿದೆ’ ಎಂದು ಅದು ತಿಳಿಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.