ADVERTISEMENT

ಬೆಲ್ಲ ತಯಾರಿಸಲು ಪ್ಲಾಸ್ಟಿಕ್‌ ತ್ಯಾಜ್ಯ ಬಳಸುತ್ತಿದ್ದ ಮೂವರ ಬಂಧನ

ಪಿಟಿಐ
Published 11 ಜೂನ್ 2020, 6:02 IST
Last Updated 11 ಜೂನ್ 2020, 6:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಜಾಫರ್‌ನಗರ: ಬೆಲ್ಲ ತಯಾರಿಕೆಗೆ ಉರುವಲಾಗಿ ಪ್ಲಾಸ್ಟಿಕ್‌ ತ್ಯಾಜ್ಯ ಬಳಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಭೋಕಹೇರಿ ಗ್ರಾಮದ ಮೂವರನ್ನು ಭೋಪಾ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

‘ಗ್ರಾಮದ ಬೆಲ್ಲ ಉತ್ಪಾದನಾ ಘಟಕದ (ಆಲೆಮನೆ) ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಲಾಯಿತು’ ಎಂದು ಠಾಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

ಈ ಮೂವರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಪ್ಪಿಸಿಕೊಂಡಿರುವ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಇದ್ದ ಎರಡು ಲೋಡ್‌ ಟ್ರಾಕ್ಟರ್‌ ಟ್ರಾಲಿಗಳನ್ನು ಸ್ಥಳದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.