ನವದೆಹಲಿ: ದೇಶದಲ್ಲಿ ಈವರೆಗೆ, ಕೊರೊನಾ ವೈರಸ್ ಓಮೈಕ್ರಾನ್‌ನ ಉಪತಳಿ ಬಿಎಫ್.7 ಸೋಂಕಿನ ಮೂರು ಪ್ರಕರಣಗಳು ಪತ್ತೆಯಾಗಿವೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಬಿಎಫ್.7 ಸೋಂಕಿನ ಮೊದಲ ಪ್ರಕರಣ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ಪತ್ತೆಯಾಯಿತು. ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣವನ್ನು ಪತ್ತೆ ಮಾಡಿತು. ಎರಡನೇ ಪ್ರಕರಣವೂ ಗುಜರಾತ್‌ನಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಪ್ರಕರಣ ಒಡಿಶಾದಲ್ಲಿ ವರದಿಯಾಗಿದೆ.
ಚೀನಾದಲ್ಲಿ ಸದ್ಯ ಅಧಿಕ ಸಂಖ್ಯೆಯಲ್ಲಿ ಕೋವಿಡ್–19 ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ವೈರಸ್‌ನ ಈ ಬಿಎಫ್.7 ಉಪತಳಿಯೇ ಕಾರಣ ಎಂದು ಮೂಲಗಳು ತಿಳಿಸಿವೆ.
‘ಚೀನಾದಲ್ಲಿ ಓಮೈಕ್ರಾನ್‌ನ ಉಪತಳಿ ಬಿಎಫ್.7 ಸೋಂಕು ವೇಗವಾಗಿ ಹರಡುತ್ತಿದೆ. ಚೀನಾ ಪ್ರಜೆಗಳ ದೇಹದಲ್ಲಿ ಈ ಮೊದಲು ಕಾಣಿಸಿಕೊಂಡ ಕೊರೊನಾ ಸೋಂಕಿನಿಂದಾಗಿ ವೃದ್ಧಿಸಿರುವ ರೋಗನಿರೋಧಕ ಶಕ್ತಿ ಕಡಿಮೆ ಮಟ್ಟದಲ್ಲಿ ಇರಬಹುದು. ಇಲ್ಲವೇ, ಅವರಿಗೆ ನೀಡಿರುವ ಲಸಿಕೆಯು ಪರಿಣಾಮಕಾರಿಯಾಗಿರದೇ ಇರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ’ ಎಂದು ಇವೇ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.