ADVERTISEMENT

ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ಮೂವರು ನಾಗರಿಕರಿಗೆ ಗಾಯ

ಪಿಟಿಐ
Published 26 ಜೂನ್ 2021, 15:24 IST
Last Updated 26 ಜೂನ್ 2021, 15:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ನಗರದ ಬಾರ್ಬರ್ಶಾ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ ಕ್ರಾಲ್‌ಖುಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಾರ್ಬರ್ಶಾದಲ್ಲಿ ಸಿಆರ್‌ಪಿಎಫ್ ಮತ್ತು ಜಮ್ಮು & ಕಾಶ್ಮೀರ ಪೊಲೀಸರ ಜಂಟಿ ಪಡೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಸ್ತೆ ಬದಿಯಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, ಮೂವರು ನಾಗರಿಕರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು.

ADVERTISEMENT

ಈ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ದಾಳಿಕೋರರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.