ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಪ್ರದೇಶದಲ್ಲಿ ನಕ್ಸಲರು ಮಣ್ಣಿನ ಕೆಳಗೆ ಅಡಗಿಸಿಟ್ಟ ಮೂರು ಸುಧಾರಿತ ಸ್ಫೋಟಕಗಳನ್ನು (ಐಇಡಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪಡೆ ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ನ 53 ನೇ ಬೆಟಾಲಿಯನ್ ಜಂಟಿ ತಂಡ ಗಸ್ತಿನಲ್ಲಿದ್ದಾಗ ಕಸ್ತೂರಮೇಟಾ-ಮೊಹಂದಿ ಗ್ರಾಮಗಳ ರಸ್ತೆಯ ಹೊಕ್ಪಾಡ್ ಪ್ರದೇಶದ ಬಳಿ ತಲಾ 5 ಕೆ.ಜಿ ತೂಕದ ಐಇಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಪ್ರೆಶರ್ ಕುಕ್ಕರ್‌ಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸ್ಫೋಟಕಗಳನ್ನು ನಕ್ಸಲೀಯರು ನೆಲದಡಿಯಲ್ಲಿ ಅಡಗಿಸಿಟ್ಟಿದ್ದರು. ಅದನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದ್ದು, ದೊಡ್ಡ ದುರಂತವನ್ನು ತಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.