ADVERTISEMENT

ಕಾಶ್ಮೀರದಲ್ಲಿ ಕಳೆದ ವರ್ಷ 30 ನಾಗರಿಕರು, 31 ಭದ್ರತಾ ಸಿಬ್ಬಂದಿ ಸಾವು -ನಿತ್ಯಾನಂದ

ಪಿಟಿಐ
Published 7 ಫೆಬ್ರುವರಿ 2023, 11:12 IST
Last Updated 7 ಫೆಬ್ರುವರಿ 2023, 11:12 IST
ನಿತ್ಯಾನಂದ ರೈ
ನಿತ್ಯಾನಂದ ರೈ   

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ 2022ರಲ್ಲಿ ನಡೆದ ಉಗ್ರರ ದಾಳಿಯಲ್ಲಿ 30 ನಾಗರಿಕರು ಮತ್ತು 31 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಂಗಳವಾರ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

2023ರ ಮೊದಲ ತಿಂಗಳಿನಲ್ಲಿ 7 ಮಂದಿ ನಾಗರಿಕರು ಮತ್ತು ಇತರ 23 ಜನ ಗಾಯಗೊಂಡಿದ್ದಾರೆ ಎಂದೂ ಅವರು ತಿಳಿಸಿದರು.

ಸರ್ಕಾರವು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಣೆಯಾಗಿದೆ ಎಂದರು.

ADVERTISEMENT

2021ರಲ್ಲಿ 41 ನಾಗರಿಕರು, 42 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಇತರ 192 ಮಂದಿ ಗಾಯಗೊಂಡಿದ್ದಾರೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.