ಜೈಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಭರವಸೆ ನೀಡಿದ್ದಾರೆ.
ರಾಜಸ್ಥಾನದ ಬಾನ್ಸ್‌ವಾಢದಲ್ಲಿ ಗುರುವಾರ ‘ಭಾರತ ಜೋಡೊ ನ್ಯಾಯ ಯಾತ್ರೆ’ಯ ವೇಳೆ ಮಾತನಾಡಿದ ಅವರು ಡಿಪ್ಲೊಮಾ-ಪದವೀಧರರಿಗೆ ಶಿಷ್ಯವೇತನ ಸಹಿತ ಅಪ್ರೆಂಟಿಸ್‌ಷಿಪ್ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಪ್ರಶ್ನೆಪತ್ರಿಕೆಗಳ ಸೋರಿಕೆ ವಿರುದ್ಧ ಕಠಿಣ ಕಾನೂನನ್ನು ಜಾರಿಗೆ ತರುವುದಾಗಿ ರಾಹುಲ್ ಗಾಂಧಿ ಘೋಷಿಸಿದರು.
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ, ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ₹5,000 ಕೋಟಿ ನಿಧಿ ನೀಡುವುದಾಗಿ ಪ್ರಕಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.