ADVERTISEMENT

ಗುಜರಾತ್‌: ಕಛ್‌ ಜಿಲ್ಲೆಯಲ್ಲಿ ಲಘು ಭೂಕಂಪ

ಪಿಟಿಐ
Published 23 ಸೆಪ್ಟೆಂಬರ್ 2024, 7:17 IST
Last Updated 23 ಸೆಪ್ಟೆಂಬರ್ 2024, 7:17 IST
<div class="paragraphs"><p> ಲಘು ಭೂಕಂಪ</p></div>

ಲಘು ಭೂಕಂಪ

   

ಅಹಮದಾಬಾದ್: ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಭೂಕಂಪ ಸಂಭವಿಸಿದೆ.

ಬೆಳಿಗ್ಗೆ 10.05ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿದೆ ಎಂದು ಗಾಂಧಿನಗರದ ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ದೃಢಪಡಿಸಿದೆ. ಯಾವುದೇ ಸಾವು–ನೋವು ಸಂಭವಿಸಿದ ವರದಿಯಾಗಿಲ್ಲ.

ADVERTISEMENT

ರಾಜ್ಯದಲ್ಲಿ ಈ ತಿಂಗಳಿನಲ್ಲಿ ಸೌರಾಷ್ಟ್ರ-ಕಛ್ ಪ್ರದೇಶದಲ್ಲಿ ದಾಖಲಾದ 3ಕ್ಕಿಂತ ಹೆಚ್ಚು ತೀವ್ರತೆಯ ನಾಲ್ಕನೇ ಕಂಪನ ಇದಾಗಿದೆ.

ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಾರ, 200 ವರ್ಷಗಳಲ್ಲಿ ರಾಜ್ಯದಲ್ಲಿ 9 ಪ್ರಮುಖ ಭೂಕಂಪಗಳು ಸಂಭವಿಸಿವೆ. 2001ರ ಕಛ್‌ನಲ್ಲಿ ಸಂಭವಿಸಿದ ಭೂಕಂಪವು ಭಾರತದಲ್ಲಿ ಸಂಭವಿಸಿದ 3ನೇ ಅತಿ ದೊಡ್ಡ ಭೂಕಂಪವಾಗಿದೆ ಎಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.