ಚೆನ್ನೈ: ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಬಂಧಿಸಿದ್ದ ರೌಡಿಶೀಟರ್ ಒಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾಗಿದ್ದು, ತಮಿಳುನಾಡಿನಲ್ಲಿ ಮತ್ತೊಂದು ಶಂಕಿತ ಕಸ್ಟಡಿ ಸಾವು ಸಂಭವಿಸಿದೆ.
ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರಾಜಶೇಖರ್ ಎಂಬುವರನ್ನು ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದರು. ವಿಚಾರಣೆ ವೇಳೆ ರಾಜಶೇಖರ್ ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ಘಟನೆ ಸಂಬಂಧ ಚೆನ್ನೈನ ಕೊಡುಂಗೈಯೂರ್ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಈ ಹಿಂದೆ ಚೆನ್ನೈನಲ್ಲಿ ವಿಘ್ನೇಶ್ ಎಂಬ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾಗಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.