ADVERTISEMENT

ಮಹಾರಾಷ್ಟ್ರ: ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ

ಪಿಟಿಐ
Published 26 ಆಗಸ್ಟ್ 2024, 12:44 IST
Last Updated 26 ಆಗಸ್ಟ್ 2024, 12:44 IST
<div class="paragraphs"><p>ಮಹಾರಾಷ್ಟ್ರದ&nbsp;ಸಿಂಧುದುರ್ಗ ಜಿಲ್ಲೆಯಲ್ಲಿರುವ ರಾಜ್‌ಕೋಟ್‌ ಕೋಟೆಯಲ್ಲಿ ನಿರ್ಮಿಸಿದ್ದ ಶಿವಾಜಿ ಪ್ರತಿಮೆ ಅಂದು– ಇಂದು</p></div>

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿರುವ ರಾಜ್‌ಕೋಟ್‌ ಕೋಟೆಯಲ್ಲಿ ನಿರ್ಮಿಸಿದ್ದ ಶಿವಾಜಿ ಪ್ರತಿಮೆ ಅಂದು– ಇಂದು

   

ಚಿತ್ರ ಕೃಪೆ: @supriya_sule

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.

ADVERTISEMENT

ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರ ಡಿ.4 ರಂದು ನೌಕಾ ದಿನದ ಹಿನ್ನೆಲೆ, ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಇದೀಗ ಕೇವಲ 9 ತಿಂಗಳಲ್ಲಿ ಪ್ರತಿಮೆ ಉರುಳಿ ಬಿದ್ದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.