ADVERTISEMENT

370ನೇ ವಿಧಿ ಯಥಾಸ್ಥಿತಿ: ಬಿಜೆಪಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 25 ಮೇ 2015, 14:24 IST
Last Updated 25 ಮೇ 2015, 14:24 IST

ಪಟ್ನಾ (ಪಿಟಿಐ): ಜಮ್ಮ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ  ಸಂವಿಧಾನದ 370ನೇ ವಿಧಿಯ ಕುರಿತು   ಪಕ್ಷವು ‘ಯಥಾಸ್ಥಿತಿ ಕಾಯ್ದುಕೊಳ್ಳಲಿದೆ’ ಎಂದು ಬಿಜೆಪಿ ಸೋಮವಾರ ಸ್ಪಷ್ಟಪಡಿಸಿದೆ.

‘370ನೇ ವಿಧಿಯ ಸಂಬಂಧ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಗುವುದು.  ಇದು ಸಾಂವಿಧಾನಾತ್ಮಕ ವಿಚಾರ ಹಾಗೂ ಈ ಕುರಿತು ಸಂಸತ್ತಿನಲ್ಲಿ ಯಾವುದೇ ಬದಲಾವಣೆ ಮಾರ್ಪಾಡು ಸಾಧ್ಯವಿಲ್ಲ’  ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಎಂ.ಜೆ. ಅಕ್ಬರ್‌  ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಂಸತ್ತಿನಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ದೊರೆತಾಗ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವುದಾಗಿ ಬಿಜೆಪಿಯ ಕೆಲ ನಾಯಕರು ಇತ್ತೀಚೆಗೆ ಹೇಳಿದ್ದರು. 

ಈ ಬಗ್ಗೆ ಮೋದಿ ಸರ್ಕಾರದ ನಿಲುವು ಏನು ಎಂಬ ಪ್ರಶ್ನೆಗೆ ಅಕ್ಬರ್‌ ಹೀಗೆ ಉತ್ತರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.