ADVERTISEMENT

ಅಂಡಮಾನ್‌: 4.3 ತೀವ್ರತೆಯ ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ನವೆಂಬರ್ 2022, 2:03 IST
Last Updated 10 ನವೆಂಬರ್ 2022, 2:03 IST
ಚಿತ್ರ ಕೃಪೆ: Twitter/@@NCS_Earthquake
ಚಿತ್ರ ಕೃಪೆ: Twitter/@@NCS_Earthquake   

ಪೋರ್ಟ್ ಬ್ಲೇರ್: ಅಂಡಮಾನ್‌ ಮತ್ತು ನಿಕೋಬರ್ ದ್ವೀಪ ಸಮೂಹದ ರಾಜಧಾನಿ ಫೋರ್ಟ್ ಬ್ಲೇರ್‌ನಿಂದ ಸುಮಾರು 253 ಕಿ.ಮೀ. ದೂರದಆಗ್ನೇಯ ದಿಕ್ಕಿನಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಈ ಕುರಿತು ಎನ್‌ಸಿಎಸ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದೆ.

ಬುಧವಾರ ಮಧ್ಯರಾತ್ರಿ 2.29ರ ವೇಳೆಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.3ರಷ್ಟಿತ್ತು.

ADVERTISEMENT

ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.