ADVERTISEMENT

ರಾಜಸ್ಥಾನ | ಔಷಧ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 4 ಸಾವು, 10 ಮಂದಿಗೆ ಗಾಯ

ಪಿಟಿಐ
Published 26 ಜೂನ್ 2024, 4:43 IST
Last Updated 26 ಜೂನ್ 2024, 4:43 IST
<div class="paragraphs"><p>ಬೆಂಕಿ ಅವಘಡ</p></div>

ಬೆಂಕಿ ಅವಘಡ

   

(ಸಾಂದರ್ಭಿಕ ಚಿತ್ರ)

ಜೈಪುರ: ರಾಜಸ್ಥಾನದ ಖೈರ್‌ತಲ್–ತಿಜಾರ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ADVERTISEMENT

‘ಭೀವಂಡಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಾವಿಗೀಡಾಗಿ, ಹತ್ತು ಮಂದಿ ಗಾಯಗೊಂಡಿದ್ದರು. ಬೆಂಕಿ ನಂದಿಸಿದ ಬಳಿಕ ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಉಪವರಿಷ್ಠಾಧಿಕಾರಿ ಶಿವರಾಜ್ ಸಿಂಗ್‌ ಮಾಹಿತಿ ನೀಡಿದ್ದಾರೆ.

ಎರಡು ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇನ್ನೆರಡು ದೇಹಗಳನ್ನು ಸ್ಥಳದಿಂದ ಹೊರತೆಗೆಯಬೇಕಷ್ಟೇ ಎಂದು ಅವರು ತಿಳಿಸಿದ್ದಾರೆ.

ಖುಷ್ಕೇಡಾ ಕೈಗಾರಿಕಾ ವಲಯದಲ್ಲಿ ಈ ಕಾರ್ಖಾನೆ ಇದ್ದು, ಔಷಧ ಕಂಪನಿಯೊಂದಕ್ಕೆ ಸೇರಿದ್ದಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.