ಶ್ರೀನಗರ: ದಕ್ಷಿಣ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಾರಿ ಹಿಮಪಾತ ಸಂಭವಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಬುಧವಾರ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಹಿಮಪಾತದಲ್ಲಿ ನಾಲ್ವರು ಸೈನಿಕರು ಸಿಲುಕಿದ್ದರು. ಅದರಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದು, ಒಬ್ಬ ಸೈನಿಕನನ್ನು ರಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ದವಾರ್ ಪ್ರದೇಶದಲ್ಲಿ ಸಂಭವಿಸಿದ್ದ ಹಿಮಪಾತದಲ್ಲಿ ಇಬ್ಬರು ಸೈನಿಕರು ಸಿಲುಕಿಕೊಂಡಿದ್ದರು. ಶೋಧ ಕಾರ್ಯಾಚರಣೆಯಲ್ಲಿ ಒಬ್ಬ ಸೈನಿಕನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಸೈನಿಕನನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.