ಪ್ರಧಾನಿ ಮೋದಿ ಅವರು ದೇಶದ ಪ್ರತಿಯೊಬ್ಬರ ಹೃದಯದಲ್ಲೂ ಇದ್ದಾರೆ ಎಂದು ಬಿಜೆಪಿ ಎಂಪಿ ಸಾದ್ವಿ ಪ್ರಗ್ಯಾ ಸಿಂಗ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಅವರು ಹೇಳಿಕೆ ನೀಡಿದ್ದಾರೆ,
ADVERTISEMENT
ಲೋಕಸಭೆ ಚುನಾವಣೆ ವೇಳೆ ಇಂಡಿಯಾ ಮೈತ್ರಿಕೂಟ ಕುಸಿದು ಬೀಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತೆಲಂಗಾಣದಲ್ಲಿ ಗೆದ್ದಿರುವ ಕಾಂಗ್ರೆಸ್ ಜೈ ಸೋನಿಯಾ ಅಮ್ಮ ಎಂದು ಘೋಷಣೆ ಕೂಗಿದೆ
ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭೋಗಸ್ ಭರವಸೆಗಳನ್ನು ತಿರಸ್ಕರಿಸಿ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಇಂದು ಸಂಜೆ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯದ ಮಾಹಿತಿ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ 68 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಅಧಿಕಾರದತ್ತ ದಾಪುಗಾಲು ಹಾಕುತ್ತಿದೆ. ಬಿಆರ್‌ಎಸ್‌ಗೆ ತೀವ್ರ ಮುಖಭಂಗವಾಗಿದ್ದು ಕೇವಲ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ರಾಜಸ್ಥಾನದಲ್ಲಿ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ವಸುಂಧರಾ ರಾಜೆ ಅವರು ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಇದೆ.
‘ದೇಶದ ಜನ ಯಾರ ಪರ ಎಂಬುದಕ್ಕೆ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಸಾಕ್ಷಿ’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ನಾಲ್ಕು ರಾಜ್ಯಗಳ ಪೈಕಿ ಮೂರು ಕಡೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ, ಭ್ರಷ್ಟಾಚಾರರಹಿತ ಆಡಳಿತ, ಅಭಿವೃದ್ಧಿ ಕೆಲಸಗಳು ಪ್ರಮುಖ ಕಾರಣ. ದೇಶದ ಸುರಕ್ಷತೆ ಗಮನದಲ್ಲಿ ಇಟ್ಟುಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಲಂಗಾಣದ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ರೇವಂತ್ ರೆಡ್ಡಿ ಅವರ ಮನೆ ಮುಂದೆ ಪೊಲೀಸ್ ಭದ್ರತೆ
ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭೋಗಸ್ ಭರವಸೆಗಳನ್ನು ತಿರಸ್ಕರಿಸಿ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ತೆಲಂಗಾಣ ಚುನಾವಣಾ ಫಲಿತಾಂಶದ ಕುರಿತು ಕೆ.ಟಿ. ರಾಮಾರಾವ್ ಪ್ರತಿಕ್ರಿಯೆ ನೀಡಿದ್ದು, ‘ತೆಲಂಗಾಣದಲ್ಲಿ ಸತತ ಎರಡು ಬಾರಿ ಸರ್ಕಾರ ನಡೆಸಲು ಬಿಆರ್‌ಎಸ್‌ಗೆ ಅಧಿಕಾರ ನೀಡಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ಪ್ರಕಟಗೊಂಡ ಫಲಿತಾಂಶದ ಬಗ್ಗೆ ಬೇಸರವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡುವ ಮೂಲಕ ರಾಜ್ಯದಲ್ಲಿ ಮತ್ತೆ ಪುಟಿದೇಳುತ್ತೇವೆ. ಜನಾದೇಶ ಪಡೆದ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.
ತೆಲಂಗಾಣ ಚುನಾವಣಾ ಫಲಿತಾಂಶ ನಮಗೆ ಸಂತಸ ತರಿಸಿದರೆ, ಉಳಿದ ಮೂರು ರಾಜ್ಯಗಳ ಫಲಿತಾಂಶ ತೀವ್ರ ನಿರಾಸೆ ತರಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ತೆಲಂಗಾಣದ ಬಿಎಸ್ ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ದ ಜನ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಾಲ್ಕು ರಾಜ್ಯಗಳ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ’ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ
‘ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳ ನಮ್ಮ ನಾಯಕರು ಇಲ್ಲಿ ಪ್ರತಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಚುನಾವಣೆ ಫಲಿತಾಂಶದ ನಂತರ ಮುಂದಿನ ಕ್ರಮಗಳ ಬಗ್ಗೆ ನಾವು ಎಚ್ಚರಿಕೆಯಿಂದ ಇದ್ದೇವೆ. ಪ್ರತಿ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ’ ಎಂದು ಡಿಕೆಶಿ ತೆಲಂಗಾಣ ಫಲಿತಾಂಶದ ಬಗ್ಗೆ ಹೇಳಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಸದ್ಯದ ಫಲಿತಾಂಶ ನಾಲ್ಕೂ ರಾಜ್ಯಗಳದ್ದು
ಛತ್ತೀಸಗಢ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುತ್ತಿದ್ದು. ಈ ಮೂಲಕ ಛತ್ತೀಸಗಢದಲ್ಲಿ ಬಿಜೆಪಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿದೆ. ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ 57, ಕಾಂಗ್ರೆಸ್ 33, ಬಿಎಸ್‌ಪಿ ಮತ್ತು ಪಕ್ಷೇತರ ಅಭ್ಯರ್ಥಿ ಸೊನ್ನೆ ಸುತ್ತಿದ್ದಾರೆ.
ಭೋಪಾಲ: ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಸೈಲಾನಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಭಾರತ್ ಆದಿವಾಸಿ ಪಾರ್ಟಿ ತನ್ನ ಮೊದಲ ಜಯ ದಾಖಲಿಸಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಸೈಲಾನಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಮಲೇಶ್ವರ ದೊಡಿಯಾರ್ ಅವರು ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹರ್ಷ ವಿಜಯ್ ಗೆಹಲೋತ್ ಅವರನ್ನು 4,618 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಜನಪರ ಕಾರ್ಯಕ್ರಮಗಳು ಛತ್ತೀಸಗಢದಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ತೆಲಂಗಾಣ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ– ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು– ಚುನಾವಣಾ ಆಯೋಗ ಕ್ರಮ–ಪೂರ್ಣ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅವರು, ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದರು.
ಮಧ್ಯಪ್ರದೇಶದಲ್ಲಿ ಬಿಜೆಪಿ ಭರ್ಜರಿ 165 ಸ್ಥಾನಗಳನ್ನು ಗೆದ್ದಿದೆ
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು ಸೋಲನ್ನು ವಿನಮ್ರವಾಗಿ ಸ್ವೀಕರಿಸುವೆ. ತೆಲಂಗಾಣ ಜನತೆಯ ಆಶೋತ್ತರಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯೊಂದಿಗೆ ಜನರು ದೃಢವಾಗಿದ್ದಾರೆ ಎಂದು ಸೂಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚುನಾವಣೆಯಲ್ಲದ ಲೋಪದೋಷಗಳನ್ನು ವಿಶ್ಲೇಷಿಸುತ್ತೇವೆ. ಜತೆಗೆ, ನಮ್ಮ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲರಾಗದ್ದೇವೆ. ಎಲ್ಲರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಕಮಲನಾಥ್ ಹೇಳಿದ್ದಾರೆ.
ತೆಲಂಗಾಣದಲ್ಲಿ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ 7 ಸ್ಥಾನಗಳಲ್ಲಿ ಜಯ ಕಂಡಿದೆ
ಕೊಪ್ಪಳ: ‘ತೆಲಂಗಾಣದಲ್ಲಿ ನಿರೀಕ್ಷೆಯಂತೆಯೇ ನಾವು ಉತ್ತಮ ಫಲಿತಾಂಶ ಪಡೆದಿದ್ದೇವೆ. ಕರ್ನಾಟಕದ ಗ್ಯಾರಂಟಿ ಯೋಜನೆಗಳು ಅಲ್ಲಿ ಯಶಸ್ಸು ನೀಡಿವೆ’ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.
‘ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಗಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈಚೆಗೆ ‘ಅಪಶಕುನ’ ಎಂದು ಹೇಳಿಕೆ ನೀಡಿದ್ದಕ್ಕೆ, ನಳಿನ್ ಕುಮಾರ್ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಮುಂದಿಟ್ಟುಕೊಂಡು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಮೂರು ರಾಜ್ಯಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.
ಚುನಾವಣೆಯಲ್ಲಿ ಬಿಆರ್‌ಎಸ್ ಸೋಲು ಕಂಡ ನಂತರದಲ್ಲಿ, ಕೆ. ಚಂದ್ರಶೇಖರ ರಾವ್ ಅವರು ತೆಲಂಗಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲೆ ತಮಿಳ್‌ಇಸೈ ಸೌಂದರರಾಜನ್ ಅವರಿಗೆ ರವಾನಿಸಿದ್ದಾರೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ ಅವರು ತಿಳಿಸಿದ್ದಾರೆ.