ADVERTISEMENT

ಮಣಿಪುರ: 40 ಮಂದಿ ಪ್ರತಿಭಟನಕಾರರ ಬಂಧನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 13:45 IST
Last Updated 12 ಸೆಪ್ಟೆಂಬರ್ 2024, 13:45 IST
<div class="paragraphs"><p>ಬಂಧನ(ಪ್ರಾತಿನಿಧಿಕ ಚಿತ್ರ)</p></div>

ಬಂಧನ(ಪ್ರಾತಿನಿಧಿಕ ಚಿತ್ರ)

   

ಗುವಾಹಟಿ: ಸಂಘರ್ಷ ಪೀಡಿತ ಮಣಿಪುರದಲ್ಲಿ ಪದೇ ಪದೇ ನೀಡುತ್ತಿರುವ ಎಚ್ಚರಿಕೆಗಳನ್ನು ಲೆಕ್ಕಿಸದೇ ಕಳೆದ ಮೂರು ದಿನಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ತೊಡಗಿದ್ದ ಏಳು ಬಾಲಕರು ಸೇರಿದಂತೆ 40 ಮಂದಿ ಪ್ರತಿಭಟನಕಾರರನ್ನು ಬುಧವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. 

ಬಂಧಿತರಲ್ಲಿ ಹೆಚ್ಚಿನವರು, ಸೋಮವಾರ ಮತ್ತು ಮಂಗಳವಾರ ರಾಜಭವನದತ್ತ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳು ಎಂದು ಮೂಲಗಳು ತಿಳಿಸಿವೆ.

ADVERTISEMENT

‘ಸಾರ್ವಜನಿಕರು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಬಾರದು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸುವಂತೆ ಮಣಿಪುರ ಜನತೆಯಲ್ಲಿ ಮನವಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ರಾಜ್ಯದ ಡಿಜಿಪಿ ಮತ್ತು ಕೇಂದ್ರದ ಭದ್ರತಾ ಸಲಹೆಗಾರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ನಿಯೋಗವನ್ನು ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಮಂಗಳವಾರ ಭೇಟಿ ಮಾಡಿದ್ದರು. 

ಮಂಗಳವಾರ ರಾಜಭವನದತ್ತ ಜಾಥಾ ಹೋಗುವಾಗ ಕಲ್ಲು ತೂರಿದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್ ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದರು. ಇದರಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇದು ರಾಜ್ಯದಾದ್ಯಂತ ಇಂಟರ್‌ನೆಟ್‌ ಸಂಪರ್ಕ ಸ್ಥಗಿತಗೊಳಿಸಲು ಮತ್ತು ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲು ಕಾರಣವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.