ADVERTISEMENT

ತ್ರಿಪುರಾ | ಶಸ್ತ್ರಾಸ್ತ್ರ ತ್ಯಜಿಸಿ, ಶರಣಾಗತಿಗೆ ಸಜ್ಜಾದ 400 ಉಗ್ರರು

ಪಿಟಿಐ
Published 24 ಸೆಪ್ಟೆಂಬರ್ 2024, 4:49 IST
Last Updated 24 ಸೆಪ್ಟೆಂಬರ್ 2024, 4:49 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಅಗರ್ತಲಾ: ತ್ರಿಪುರಾದಲ್ಲಿ ಸುಮಾರು 400 ಉಗ್ರರು ಮುಖ್ಯಮಂತ್ರಿ ಮಾಣಿಕ್‌ ಸಹಾ ಅವರ ಸಮ್ಮುಖದಲ್ಲಿ ಇಂದು (ಮಂಗಳವಾರ) ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಉಗ್ರಗಾಮಿಗಳು ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್‌ಗೆ (ಎಟಿಟಿಎಫ್) ಸೇರಿದವರು.

ADVERTISEMENT

ಸೆಪ್ಟೆಂಬರ್ 4ರಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಉಗ್ರರು ಶರಣಾಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎರಡು ನಿಷೇಧಿತ ಉಗ್ರ ಸಂಘಟನೆಗಳ ಎಲ್ಲಾ ನಾಯಕರು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಸಂಘಟನೆಗಳು 1990ರ ದಶಕದ ಉತ್ತರಾರ್ಧದಿಂದ ಎರಡು ದಶಕಗಳ ಕಾಲ ರಾಜ್ಯದಲ್ಲಿ ಆತಂಕ ಸೃಷ್ಟಿಸಿದವು. ಉಗ್ರರ ದಾಳಿಯಿಂದಾಗಿ ವಿಶೇಷವಾಗಿ ಬುಡಕಟ್ಟಿಗೆ ಸೇರದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಎರಡು ಸಂಘಟನೆಗಳ ಉಗ್ರಗಾಮಿಗಳ ಪುನರ್ವಸತಿಗಾಗಿ ಕೇಂದ್ರವು ₹250 ಕೋಟಿ ಆರ್ಥಿಕ ನೆರವು ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.