ನಾಗ್ಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಭೂಕಂಪ ಸಂಭವಿಸಿದೆ.
ಇಂದು ಮಧ್ಯಾಹ್ನ 1.37ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ. ಯಾವುದೇ ಸಾವು–ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಚಿಕಲ್ಧಾರಾ, ಕಟ್ಕುಂಭ್, ಚೂರ್ಣಿ, ಪಚ್ಡೊಂಗ್ರಿ ಮತ್ತು ಮೆಲ್ಘಾಟ್ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಜಿಲ್ಲಾಧಿಕಾರಿ ಭಟ್ಕರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಪರತವಾಡ ನಗರದ ಕೆಲವು ಭಾಗಗಳಲ್ಲಿ ಮತ್ತು ಅಕೋಟ್ ಪ್ರದೇಶಗಳಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.