ADVERTISEMENT

4,327 ನಗರ ಸ್ಥಳೀಯ ಸಂಸ್ಥೆಗಳು ಬಯಲು ಬಹಿರ್ದೆಸೆ ಮುಕ್ತ

ಪಿಟಿಐ
Published 1 ಅಕ್ಟೋಬರ್ 2020, 14:32 IST
Last Updated 1 ಅಕ್ಟೋಬರ್ 2020, 14:32 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ನವದೆಹಲಿ: ಸ್ವಚ್ಛ ಭಾರತ್‌ ಅಭಿಯಾನದಡಿ(ಎಸ್‌ಬಿಎಂ–ಯು) 4,327ನಗರ ಸ್ಥಳೀಯ ಸಂಸ್ಥೆಗಳನ್ನು ಬಯಲು ಬಹಿರ್ದೆಸೆ ಮುಕ್ತ ಪ್ರದೇಶವಾಗಿ ಘೋಷಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

‘ಅಭಿಯಾನದ ಗುರಿಯನ್ನೂ ಮೀರಿ, 66 ಲಕ್ಷ ಮನೆಗಳಲ್ಲಿ ಶೌಚಾಲಯ ಹಾಗೂ 6 ಲಕ್ಷ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಘನ ತ್ಯಾಜ್ಯ ನಿರ್ವಹಣೆ ಹಾಗೂ ಸ್ವಚ್ಛತೆ ವಿಭಾಗದಲ್ಲಿ ಎಸ್‌ಬಿಎಂಯು ಮಹತ್ತರವಾದ ಪ್ರಗತಿಯನ್ನು ಸಾಧಿಸಿದೆ’ ಎಂದು ಪ್ರಕಟಣೆಯಲ್ಲಿ ಸಚಿವಾಲಯ ತಿಳಿಸಿದೆ.

‘ಘನ ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ, ಶೇ 97 ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ ಹಾಗೂ ಶೇ 77 ವಾರ್ಡ್‌ಗಳಲ್ಲಿ ಮೂಲದಲ್ಲೇ ತ್ಯಾಜ್ಯ ಬೇರ್ಪಡಿಸುವಿಕೆಯಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.