ಇಟಾನಗರ: ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.7ರಷ್ಟಿತ್ತು.
ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ಕಂಪನ ಸಂಭವಿಸಿದೆ. 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಅಂಡಮಾನ್ ಮತ್ತು ನಿಕೋಬರ್ ದ್ವೀಪ ಸಮೂಹದ ರಾಜಧಾನಿ ಫೋರ್ಟ್ ಬ್ಲೇರ್‌ನಿಂದ ಸುಮಾರು 253 ಕಿ.ಮೀ. ದೂರದ ಆಗ್ನೇಯ ದಿಕ್ಕಿನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಇದನ್ನೂ ಓದಿ:ಅಂಡಮಾನ್: 4.3 ತೀವ್ರತೆಯ ಭೂಕಂಪ
ಬುಧವಾರ ನೇಪಾಳದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಹಲವು ಮನೆಗಳು ನೆಲಸಮಗೊಂಡಿದ್ದವು. ಭೂಕಂಪದ ತೀವ್ರತೆಗೆ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಕಂಪನದ ಅನುಭವವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.