ADVERTISEMENT

ಮಣಿಪುರ | ಮರುಕಳಿಸಿದ ಹಿಂಸಾಚಾರ: 5 ಮನೆಗಳಿಗೆ ಬೆಂಕಿ ಹಚ್ಚಿದ ಶಂಕಿತ ಉಗ್ರರು

ಪಿಟಿಐ
Published 2 ಸೆಪ್ಟೆಂಬರ್ 2024, 6:42 IST
Last Updated 2 ಸೆಪ್ಟೆಂಬರ್ 2024, 6:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಇಂಫಾಲ್: ಮಣಿಪುರದ ಇಂಫಾಲ್‌ನ ಪಶ್ಚಿಮ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಿಂಸಾಚಾರ ಮರುಕಳಿಸಿದೆ. ಶಂಕಿತ ಉಗ್ರರು ಕನಿಷ್ಠ ಐದು ಮನೆಗಳನ್ನು ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಕೌತುಕ್ರ ಮತ್ತು ನೆರೆಯ ಕಡಂಗ್‌ಬಂಡ್‌ನ ತಗ್ಗು ಪ್ರದೇಶಗಳಲ್ಲಿ ಶಂಕಿತ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಿವಾಸಿಗಳು ತಮ್ಮ ಮನೆಗಳನ್ನು ತೊರೆದ್ದರು.

ADVERTISEMENT

ನಿವಾಸಿಗಳು ತೊರೆದ 5 ಮನೆಗಳಿಗೆ ಉಗ್ರರು ಬೆಂಕಿ ಹಚ್ಚಿದ್ದಾರೆ. ಭಾನುವಾರ ರಾತ್ರಿ ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 1 ರಂದು ಶಂಕಿತ ಉಗ್ರರು ಈ ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟು ‌9 ಮಂದಿ ಗಾಯಗೊಂಡಿದ್ದಾರೆ.

ರಾಜ್ಯ ರಾಜಧಾನಿ ಇಂಫಾಲ್‌ನಿಂದ 18 ಕಿ.ಮೀ ದೂರದಲ್ಲಿರುವ ಕೌತುಕ್ರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು.

ಭಾನುವಾರ ಶಂಕಿತ ಉಗ್ರರು ಮತ್ತೆ ದಾಳಿ ನಡೆಸಿದ್ದು, ನಿವಾಸಿಗಳಲ್ಲಿ ಆತಂಕ ಉಂಟಾಗಿತ್ತು. ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ರಾಕೆಟ್ ಚಾಲಿತ ಗ್ರೆನೇಡ್‌ಗಳು ಮತ್ತು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.