ADVERTISEMENT

ಕನ್ಯಾಕುಮಾರಿ ಬೀಚ್‌ನಲ್ಲಿ ಮುಳುಗಿ ಐವರು ಎಂಬಿಬಿಎಸ್ ವಿದ್ಯಾರ್ಥಿಗಳ ಸಾವು

ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಮೇ 2024, 12:56 IST
Last Updated 6 ಮೇ 2024, 12:56 IST
<div class="paragraphs"><p>ಕನ್ಯಾಕುಮಾರಿ </p></div>

ಕನ್ಯಾಕುಮಾರಿ

   

ಚೆನ್ನೈ: ಸಮುದ್ರಕ್ಕೆ ಈಜಲು ಹೋಗಿದ್ದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ADVERTISEMENT

ಕಾಲೇಜಿನ ಒಂದು ತಂಡ ತಮ್ಮ ಸಹಪಾಠಿಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಕನ್ಯಾಕುಮಾರಿಗೆ ಆಗಮಿಸಿತ್ತು.

ಮದುವೆಗೆ ಬಂದಿದ್ದ ಕೆಲ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ಬಳಿ ಮುಚ್ಚಲ್ಪಟ್ಟಿರುವ ಲೇಮೂರ್ ಬೀಚ್‌ಗೆ ತೆಂಗಿನತೋಟವೊಂದರ ಮೂಲಕ ಸೋಮವಾರ ಮುಂಜಾನೆ ಪ್ರವೇಶ ಮಾಡಿದ್ದರು. ಇಲ್ಲಿ ನೀರಿನ ಮಟ್ಟ ಜಾಸ್ತಿ ಇತ್ತು. ಈಜು ಬಾರದೇ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಐವರೂ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ ಎಂದು ಕನ್ಯಾಕುಮಾರಿ ಎಸ್‌.ಪಿ ಈ. ಸುಂದರವದನಂ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದ ಮೃತರು ಇನ್ನೇನು ಪದವಿ ಮುಗಿಸಿ ಕಾಲೇಜಿನಿಂದ ಹೊರಡುವವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.