ADVERTISEMENT

ಛತ್ತೀಸಗಢ: ಐವರು ನಕ್ಸಲರ ಸೆರೆ

ಪಿಟಿಐ
Published 7 ಜುಲೈ 2024, 12:50 IST
Last Updated 7 ಜುಲೈ 2024, 12:50 IST
<div class="paragraphs"><p>ನಕ್ಸಲ್</p></div>

ನಕ್ಸಲ್

   

ಸುಕ್ಮಾ (ಛತ್ತೀಸಗಢ): ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಬ್ಯಾರೆಲ್ ಗ್ರೆನೇಡ್‌ ಲಾಂಚರ್‌ ಶೆಲ್‌ಗಳು ಮತ್ತು ಟಿಫಿನ್‌ ಬಾಂಬ್‌ ಸೇರಿದಂತೆ ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. 

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಬಸ್ತಾರ್ ಫೈಟರ್ಸ್‌ ಮತ್ತು ಜಿಲ್ಲಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಜಾಗರ್‌ಗುಂಡ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಕ್ಸಲರನ್ನು ಬಂಧಿಸಲಾಗಿದೆ. ಇವರು ಚಿಂತಾಲ್ನಾರ್‌ ಪೊಲೀಸ್‌ ಠಾಣಾ ವ್ಯಾಪ್ತಿ ಪ್ರದೇಶದ ನಿವಾಸಿಗಳಾಗಿದ್ದು ಸುರ್ಪಂಗುಡ ಪ್ರದೇಶದಲ್ಲಿ ಸಕ್ರಿಯರಾಗಿದ್ದರು ಎಂದು ಅವರು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.