ADVERTISEMENT

ಅಸ್ಸಾಂ: ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು ಐವರು ವಿಚಾರಣಾಧೀನ ಕೈದಿಗಳು ಪರಾರಿ

ಪಿಟಿಐ
Published 12 ಅಕ್ಟೋಬರ್ 2024, 9:27 IST
Last Updated 12 ಅಕ್ಟೋಬರ್ 2024, 9:27 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮೊರಿಗಾಂವ್: ಅಸ್ಸಾಂನ ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಐವರು ವಿಚಾರಣಾಧೀನ ಕೈದಿಗಳು ಶುಕ್ರವಾರ ಮುಂಜಾನೆ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಡರಾತ್ರಿ 1 ರಿಂದ 2 ಗಂಟೆಯ ನಡುವೆ ಜೈಲಿನ ಕಂಬಿಗಳನ್ನು ಮುರಿದು ಪರಾರಿಯಾಗಿದ್ದಾರೆ ಎಂದು ಮೊರಿಗಾಂವ್‌ನ ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ತಿಳಿಸಿದ್ದಾರೆ.

ADVERTISEMENT

ಈ ಐವರು ವಿಚಾರಣಾಧೀನ ಕೈದಿಗಳು ಪೋಕ್ಸೊ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ತಮ್ಮ ಸೆಲ್‌ನ ಕಬ್ಬಿಣದ ಗ್ರಿಲ್ ಅನ್ನು ಮುರಿದು, ಬೆಡ್ ಶೀಟ್‌ಗಳು, ಬ್ಲಾಂಕೆಟ್‌ಗಳು ಮತ್ತು ಲುಂಗಿಗಳನ್ನು ಬಳಸಿ ಹಗ್ಗವನ್ನು ತಯಾರಿಸಿ ಜೈಲಿನ 20 ಅಡಿ ಎತ್ತರದ ಗೋಡೆಯಿಂದ ಜಿಗಿದು ಪರಾರಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರಾರಿಯಾದ ಕೈದಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ಡಿಸಿ ಶರ್ಮಾ ತಿಳಿಸಿದ್ದಾರೆ.

ಜೈಲಿನ ಭದ್ರತಾ ಸಿಬ್ಬಂದಿಯಿಂದ ಲೋಪವಾಗಿದೆಯೇ? ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಐವರು ಕೈದಿಗಳ್ಲಿ ಮೂವರನ್ನು ಲಹರಿಘಾಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಇನ್ನಿಬ್ಬರನ್ನು ಮೊಯಿರಾಬರಿ ಮತ್ತು ತೇಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣ ಸಂಬಂಧ ಬಂಧಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.