ಸುಪಾಲ್: ಬಿಹಾರದಲ್ಲಿ ಐದು ವರ್ಷದ ಬಾಲಕನೊಬ್ಬ ಶಾಲೆಗೆ ಬಂದೂಕು ತಂದು 3ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ್ದಾನೆ.
ಈ ಘಟನೆ ಸುಪಾಲ್ ನಗರದ ಸೆ.ಜೋನ್ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದೆ.
ನರ್ಸರಿ ವಿದ್ಯಾರ್ಥಿಯಾಗಿದ್ದ ಬಾಲಕ ಮನೆಯಲ್ಲಿ ಇದ್ದ ಬಂದೂಕನ್ನು ತನ್ನ ಬ್ಯಾಗಿನಲ್ಲಿ ಇಟ್ಟುಕೊಂಡು ಬಂದಿದ್ದಾನೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ಆ ವಿದ್ಯಾರ್ಥಿಯ ಕೈಗೆ ತಗುಲಿದ್ದು ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಶಾಲೆಯ ಆವರಣಲ್ಲಿ ಅವನು ತನ್ನ ಚೀಲದಿಂದ ಬಂದೂಕು ತೆಗೆದು ನನ್ನ ಮೇಲೆ ಗುಂಡು ಹಾರಿಸಿದ. ನಾನು ಅವನನ್ನು ತಡೆಯಲು ಪ್ರಯತ್ನಿಸಿದಾಗ ಗುಂಡು ನನ್ನ ಕೈಗೆ ತಗುಲಿತು ಎಂದು ಗಾಯಗೊಂಡ ವಿದ್ಯಾರ್ಥಿ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ಅವನೊಂದಿಗೂ ನನಗೂ ಯಾವುದೇ ಜಗಳವಿಲ್ಲ ಎಂದೂ ಆತ ಹೇಳಿದ್ದಾನೆ.
ಘಟನೆ ಸಂಬಂಧ ಪೊಲೀಸರು ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿಯ ತಂದೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.