ADVERTISEMENT

ಹಿಮಾಚಲ ಪ್ರದೇಶ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ

ಪಿಟಿಐ
Published 4 ಏಪ್ರಿಲ್ 2024, 17:08 IST
Last Updated 4 ಏಪ್ರಿಲ್ 2024, 17:08 IST
 ಭೂಕಂಪ
ಭೂಕಂಪ    (ಪ್ರಾತಿನಿಧಿಕ ಚಿತ್ರ)

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ರಾತ್ರಿ 9.34ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಅದು ತಿಳಿಸಿದೆ.

ಚಂಡೀಗಡ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದ ಕೆಲ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.

ADVERTISEMENT

‘ಕೆಲ ಸೆಕೆಂಡ್‌ಗಳ ಕಾಲ ಭೂಮಿ ನಡುಗುವ ಅನುಭವವಾಯಿತು. ನಾನು ಗಾಬರಿಯಿಂದ ಕೆಳಮಹಡಿಗೆ ಓಡುವಷ್ಟರಲ್ಲಿ ಕಂಪನ ನಿಂತಿತ್ತು’ ಎಂದು ಚಂಡೀಗಢದ ನಿವಾಸಿ ಸಂಜಯ್ ಕುಮಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.