ಇಂಫಾಲ್: ಮಣಿಪುರದ ಕಾಮ್‌ಜೋಂಗ್ ಜಿಲ್ಲೆಯಲ್ಲಿ 5,457 ಅಕ್ರಮ ವಸಲಸಿಗರನ್ನು ಗುರುತಿಸಲಾಗಿದ್ದು, ಅವರನ್ನು ಗಡಿಪಾರು ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.
ಈ ಪೈಕಿ 5,173 ಜನರ ಬಯೋಮೆಟ್ರಿಕ್ ದತ್ತಾಂಶವನ್ನು ರದ್ದು ಮಾಡಲಾಗಿದೆ ಎಂದು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಈ ವಿಚಾರವನ್ನು ಅತ್ಯಂತ ಸೂಕ್ಷ್ಮವಾಗಿ ನಿರ್ವಹಿಸಲಾಗುತ್ತಿದ್ದು, ಎಲ್ಲ ಅಕ್ರಮ ವಲಸಿಗರಿಗೆ ಮಾವನೀಯ ನೆರವನ್ನು ಸರ್ಕಾರ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮ್ಯಾನ್ಮಾರ್ ಗಡಿ ದಾಟಿ ಮಣಿಪುರಕ್ಕೆ ಬಂದಿದ್ದ 38 ಅಕ್ರಮ ವಲಸಿಗರನ್ನು ತೆಂಗ್‌ನೌಪಾಲ್ ಜಿಲ್ಲೆಯ ಮೊರೆಹ್ ಪಟ್ಟಣದಿಂದ ಗಡಿಪಾರು ಮಾಡಲಾಗಿದೆ. ಮೊದಲ ಹಂತದಲ್ಲಿ ಒಟ್ಟು 77 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.