ಜೈಪುರ/ಕೋಲ್ಕತ್ತ: ರಾಜಸ್ಥಾನದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಎರಡು ಲೋಕಸಭಾ ಕ್ಷೇತ್ರಗಳಿಗೆ ಕಳೆದ ವಾರ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಪಶ್ಚಿಮ ಬಂಗಾಳದ ಒಂದು ವಿಧಾನಸಭೆ ಮತ್ತು ಒಂದು ಲೋಕಸಭೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಜಯ ಸಾಧಿಸಿದೆ.
ರಾಜಸ್ಥಾನದ ಆಲ್ವಾರ್ ಹಾಗು ಅಜ್ಮೀರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇದರೊಂದಿಗೆ, ಆಡಳಿತರೂಢ ಬಿಜೆಪಿ ವಶದಲ್ಲಿದ್ದ ಕ್ಷೇತ್ರಗಳು ಕಾಂಗ್ರೆಸ್ ಪಾಲಾದಂತಾಗಿದೆ.
ಅಲ್ವಾರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕರಣ್ ಸಿಂಗ್ ಯಾದವ್ ಮತ್ತು ಬಿಜೆಪಿಯ ಜಸ್ವಂತ್ ಸಿಂಗ್ ಯಾದವ್ ಕಣದಲ್ಲಿದ್ದರು. ಅಜ್ಮೀರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಘು ಶರ್ಮಾ ಮತ್ತು ಬಿಜೆಪಿಯ ರಾಮ್ ಸ್ವರೂಪ್ ಲಾಂಬಾ ಸ್ಪರ್ಧಿಸಿದ್ದರು. ಮತ್ತೊಂದೆಡೆ, ಮಂಡಲಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಿವೇಕ್ ಧಾಕಡ್ ಅವರು ಗೆಲುವು ಸಾಧಿಸಿದ್ದಾರೆ.
ರಾಜಸ್ಥಾನದಲ್ಲಿ ಜನವರಿ 29ರಂದು ಉಪ ಚುನಾವಣೆ ನಡೆದಿತ್ತು.
ಪಶ್ಚಿಮ ಬಂಗಾಳದ ನೋಪರಾ ವಿಧಾನಸಭಾ ಕ್ಷೇತ್ರ ಮತ್ತು ಉಲ್ಬೇರಿಯಾ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಟಿಎಂಸಿ ಜಯ ಗಳಿಸಿದೆ.
ರಾಹುಲ್ ಗಾಂಧಿ ಹರ್ಷ: ರಾಜಸ್ಥಾನದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸಿರುವುದಕ್ಕೆ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.