ADVERTISEMENT

ಲೋಯ: ವಿಚಾರಣೆ ವ್ಯಾಪ್ತಿ ವಿಸ್ತರಣೆಗೆ ನಕಾರ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 19:30 IST
Last Updated 2 ಫೆಬ್ರುವರಿ 2018, 19:30 IST

ನವದೆಹಲಿ: ಸಿಬಿಐ ವಿಶೇಷ ನ್ಯಾಯಾಧೀಶ ಎಚ್.ಬಿ. ಲೋಯ ಅವರ ಸಾವಿನ ಕುರಿತಾದ ಪ್ರಕರಣದ ವಿಚಾರಣೆಯಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವುದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಲೋಯ ಅವರು ನಿಗೂಢವಾಗಿ ಸಾವನ್ನಪ್ಪಿದ್ದು, ಈ ಕುರಿತು ಸ್ವತಂತ್ರ ತನಿಖೆ ನಡೆಸುವ ಅವಶ್ಯಕತೆ ಇರುವುದಾಗಿ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸೊಹ್ರಾಬುದ್ದೀನ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರೂ ಆರೋಪಿಯಾಗಿದ್ದು, ಅವರ ಹೆಸರನ್ನು ಕೈಬಿಡಲಾಗಿದೆ. ಆದ್ದರಿಂದ ಅವರಿಗೂ ಈ ಪ್ರಕಣದಲ್ಲಿ ನೋಟಿಸ್‌ ಜಾರಿಗೊಳಿಸಬೇಕು ಎಂದು ಅರ್ಜಿದಾರರು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ, ‘ನಮ್ಮ ವ್ಯಾಪ್ತಿ ಮೀರಲು ಆಗುವುದಿಲ್ಲ’ ಎಂದು ಹೇಳಿ ವಿಚಾರಣೆಯನ್ನು ಫೆಬ್ರುವರಿ 8ಕ್ಕೆ ಮುಂದೂಡಿದರು. ಅಂದು ಈ ಕುರಿತು ವಾದ ಮಂಡಿಸಬಹುದು ಎಂದು ವಕೀಲರಿಗೆ ಸೂಚಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.