ADVERTISEMENT

ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ: ಎನ್‌ಡಿಆರ್‌ಎಫ್‌ನ ಆರು ತಂಡ ನಿಯೋಜನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2022, 3:01 IST
Last Updated 6 ಡಿಸೆಂಬರ್ 2022, 3:01 IST
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ   

ಚೆನ್ನೈ:ತಮಿಳುನಾಡಿನಲ್ಲಿ ಡಿಸೆಂಬರ್ 8 ರಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ಆರು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ.

ನಾಗಪಟ್ಟಣಂ, ತಾಂಜಾವೂರು, ತಿರುವರೂರು, ಕಡಲೂರು, ಮಯಿಲಾಡುಥುರೈ ಮತ್ತು ಚೆನ್ನೈನಲ್ಲಿ ಎನ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗುತ್ತದೆ.ಈ ಸಂಬಂಧ ಎಎನ್‌ಐ ಟ್ವೀಟ್‌ ಮಾಡಿದೆ.

ದಕ್ಷಿಣ ಅಂಡಮಾನ್‌ ಸಾಗರದಲ್ಲಿ ಕಡಿಮೆ ಒತ್ತಡ ರೂಪುಗೊಂಡಿದೆ. ಇದು ಪಶ್ಚಿಮ–ವಾಯುವ್ಯದ ಕಡೆಗೆ ಚಲಿಸಿ, ಅಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗುವ ಸಾಧ್ಯತೆ ಇದೆಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ತಮಿಳುನಾಡಿನ ವಿಪತ್ತು ನಿರ್ವಹಣಾ ನಿರ್ದೇಶಕರ ವಿನಂತಿಯಂತೆ ಎನ್‌ಡಿಆರ್‌ಎಫ್‌ನ ಆರು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.