ಅಹಮದಾಬಾದ್: ಗುಜರಾತ್ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕೆ ದೋಣಿಯೊಂದರಲ್ಲಿ ಸಾಗಿಸುತ್ತಿದ್ದ ₹200 ಕೋಟಿ ಮೌಲ್ಯದ 40 ಕೆ.ಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಗುಜರಾತ್ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಮತ್ತು ಭಾರತೀಯ ಕರಾವಳಿ ಕಾವಲು ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ.
ಗುಜರಾತ್‌ನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು.
ಗುಜರಾತ್ ಕರಾವಳಿಯಲ್ಲಿ ಹೆರಾಯಿನ್ ಇಳಿಸಿ ರಸ್ತೆ ಮಾರ್ಗದ ಮೂಲಕ ಪಂಜಾಬ್‌ಗೆ ಸಾಗಿಸುವ ಇರಾದೆ ಹೊಂದಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.