ADVERTISEMENT

LS Polls | ದೆಹಲಿಯಲ್ಲಿ ಮತದಾನ: 60,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಪಿಟಿಐ
Published 25 ಮೇ 2024, 2:44 IST
Last Updated 25 ಮೇ 2024, 2:44 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು 60,000ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ದೆಹಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಿಗೆ ಇಂದು (ಶನಿವಾರ) ಬೆಳಿಗ್ಗೆ ಮತದಾನ ಆರಂಭಗೊಂಡಿದೆ.

ADVERTISEMENT

ಉತ್ತರಾಖಂಡ, ರಾಜಸ್ಥಾನ ಮತ್ತು ಮಧ್ಯಪ್ರದೇಶದಿಂದ ಸುಮಾರು 51 ಅರೆಸೇನಾ ಪಡೆಗಳು ಮತ್ತು 13,500 ಹೋಮ್‌ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಪ್ರದೇಶ ಮತ್ತು ಹರಿಯಾಣದ ಗಡಿ ಭಾಗಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ದೆಹಲಿಯಲ್ಲಿ ಸುಮಾರು 60,000 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವರಲ್ಲಿ ಕನಿಷ್ಠ 33,000 ಮಂದಿ ಮತದಾನ ಕೇಂದ್ರಗಳಲ್ಲಿ ಕಾವಲು ಕಾಯುತ್ತಿದ್ದಾರೆ. ನಗರದಲ್ಲಿ ಒಟ್ಟು 2,628 ಮತದಾನ ಕೇಂದ್ರಗಳಿವೆ. ಅವುಗಳಲ್ಲಿ 429 ಮತಗಟ್ಟೆ ಕೇಂದ್ರಗಳನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿದೆ. ಈ ಕೇಂದ್ರಗಳಲ್ಲಿ ಹೆಚ್ಚುವರಿ ಅರೆಸೇನಾ ಪಡೆ ಸಿಬ್ಬಂದಿ, ಡ್ರೋನ್‌ ಮತ್ತು ಸಿಸಿಟಿವಿ ಕ್ಯಾಮೆರಾಗಳೊಂದಿಗೆ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಉಪ ಪೊಲೀಸ್‌ ಆಯುಕ್ತ ಸಂಜಯ್‌ ಸೆಹ್ರಾವತ್‌ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್‌ 1ರಂದು ನಡೆಯಲಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.