ನವದೆಹಲಿ: ಕೊರೊನಾ ವೈರಸ್‌ನ ಹೊಸ ಉಪತಳಿ ಜೆಎನ್.1ರ ಎಂಟು ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ದೇಶದಲ್ಲಿ ಈ ತಳಿಯ ಒಟ್ಟು 63 ಪ್ರಕರಣಗಳು ಭಾನುವಾರದವರೆಗೆ ವರದಿಯಾಗಿವೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಮಹಾರಾಷ್ಟ್ರದಲ್ಲಿ 9, ಕೇರಳದಲ್ಲಿ 6, ತಮಿಳುನಾಡಿನಲ್ಲಿ 4 ಮತ್ತು ತೆಲಂಗಾಣದಲ್ಲಿ 2 ಪ್ರಕರಣಗಳು ವರದಿಯಾಗಿವೆ.
ಆಸ್ಪತ್ರೆಗೆ ದಾಖಲಾಗುವ ಪ್ರಮಾಣದಲ್ಲಿ ಯಾವುದೇ ಏರಿಕೆಯಾಗಿಲ್ಲ. ಇತರ ವೈದ್ಯಕೀಯ ಕಾರಣಗಳಿಗೆ ಆಸ್ಪತ್ರೆಗೆ ದಾಖಲಾದವರಲ್ಲಿ ಕೋವಿಡ್-19 ಪ್ರಾಸಂಗಿಕವಾಗಿ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಒಂದೇ ದಿನ ಕೋವಿಡ್‌ನ 628 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,054ಕ್ಕೆ ಏರಿದೆ. ಕಳೆದ 24 ತಾಸುಗಳ ಅವಧಿಯಲ್ಲಿ ಕೇರಳದಲ್ಲಿ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.