ADVERTISEMENT

‘ನೀಟ್‌’ ನಿಯಮ ಉಲ್ಲಂಘನೆ: 23 ಅಭ್ಯರ್ಥಿಗಳು ಡಿಬಾರ್‌

ಪಿಟಿಐ
Published 12 ಜೂನ್ 2024, 19:43 IST
Last Updated 12 ಜೂನ್ 2024, 19:43 IST
ನೀಟ್
ನೀಟ್   

ನವದೆಹಲಿ: ಪ್ರಸಕ್ತ ಸಾಲಿನ ‘ನೀಟ್‌–ಯುಜಿ’ ಪರೀಕ್ಷೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪರೀಕ್ಷೆ ಬರೆದ 63 ಅಭ್ಯರ್ಥಿಗಳ ಮೇಲೆ ಪ್ರಕರಣಗಳು ದಾಖಲಾಗಿರುವುದು ವರದಿಯಾಗಿದ್ದು, ಅವರಲ್ಲಿ 23 ಅಭ್ಯರ್ಥಿಗಳನ್ನು ಡಿಬಾರ್‌ ಮಾಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿಲ್ಲ ಎಂದು ಪುನರುಚ್ಚರಿಸಿರುವ ಅವರು, ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ. 

ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಉಳಿದ 40 ಅಭ್ಯರ್ಥಿಗಳ ಫಲಿತಾಂಶಗಳನ್ನು ತಡೆಹಿಡಿಯಲಾಗಿದೆ ಎಂದು ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ನಕಲಿ ಅಭ್ಯರ್ಥಿ, ವಂಚನೆ, ಒಎಂಆರ್‌ ಶೀಟ್‌ ತಿದ್ದುವಿಕೆ ಮೊದಲಾದ ರೀತಿಯ ಪ್ರಕರಣಗಳ ಪರಿಶೀಲನೆಗಾಗಿ ಮೂವರು ಪರೀಕ್ಷಾ ತಜ್ಞರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯ ಶಿಫಾರಸಿನ ಮೇರೆಗೆ 12 ಅಭ್ಯರ್ಥಿಗಳನ್ನು ಮೂರು ವರ್ಷಗಳವರೆಗೆ, ಒಂಬತ್ತು ಅಭ್ಯರ್ಥಿಗಳನ್ನು ಎರಡು ವರ್ಷಗಳವರೆಗೆ ಮತ್ತು ಇಬ್ಬರು ಅಭ್ಯರ್ಥಿಗಳನ್ನು ತಲಾ ಒಂದು ವರ್ಷಕ್ಕೆ ಪರೀಕ್ಷೆ ತೆಗೆದುಕೊಳ್ಳದಂತೆ ಡಿಬಾರ್‌ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ ಎಂದು ಸಿಂಗ್‌ ಹೇಳಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.