ADVERTISEMENT

7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಂಪುಟ ಅಸ್ತು

ಏಜೆನ್ಸೀಸ್
Published 28 ಜೂನ್ 2017, 19:07 IST
Last Updated 28 ಜೂನ್ 2017, 19:07 IST
7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಂಪುಟ ಅಸ್ತು
7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸಂಪುಟ ಅಸ್ತು   

ನವದೆಹಲಿ: 7ನೇ ವೇತನ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಈ ವರ್ಷದ ಜುಲೈ 1ರಿಂದಲೇ ಜಾರಿಗೆ ಬರಲಿವೆ. ಈ ನಿರ್ಧಾರದಿಂದ ಕೇಂದ್ರ ಸರ್ಕಾರಿ ನೌಕರರ ವೇತನದ ವಿವಿಧ ಭತ್ಯೆಗಳು ಏರಿಕೆಯಾಗಲಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ತಿಳಿಸಿದ್ದಾರೆ.

‘ಪಿಂಚಣಿದಾರರಿಗೆ ವೈದ್ಯಕೀಯ ಭತ್ಯೆ ದುಪ್ಪಟ್ಟಾಗಲಿದೆ. ಸೈನಿಕರ ಸಿಯಾಚಿನ್‌ ಭತ್ಯೆ ₹ 14 ಸಾವಿರದಿಂದ ₹ 30 ಸಾವಿರಕ್ಕೆ ಏರಿಕೆಯಾಗಲಿದೆ. ಸೇನಾಧಿಕಾರಿಗಳ ಭತ್ಯೆ ₹ 21 ಸಾವಿರದಿಂದ ₹ 42 ಸಾವಿರಕ್ಕೆ ಹೆಚ್ಚಳವಾಗಲಿದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.