ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಂಭವ ಇರುವ ಕಾರಣ ತೀವ್ರ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಈಗಾಗಲೇ 4 ಬೆಟಾಲಿಯನ್‌ನ 7 ಎನ್‌ಡಿಆರ್‌ಎಫ್ ತಂಡಗಳು, ಎರಡು ಶ್ವಾನದಳಗಳನ್ನು ನಿಯೋಜಿಸಲಾಗಿದೆ.
ಬುಧವಾರ ಚಂಡಮಾರುತ ರೂಪಗೊಳ್ಳಲಿದ್ದು, ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಗಡಿಯತ್ತ ಸಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಗಪಟ್ಟಣಂ, ಕರಯಿಕಲ್ ಸೇರಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮುಖ್ಯಮಂತ್ರಿ ಸಭೆ
ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.