ಮೊರಾದಾಬಾದ್, (ಉತ್ತರ ಪ್ರದೇಶ): 7 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಬಳಿಕ ಹತ್ಯೆ ಮಾಡಲಾಗಿರುವ ಘಟನೆ ಮೊರಾದಾಬಾದ್ನ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಾಲಕಿ, ಮನೆಯ ಮುಂದೆ ಆಟವಾಡುತ್ತಿದ್ದಾಗ ಡಿಸೆಂಬರ್ 22ರಂದು ಕಾಣೆಯಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ರೈತರೊಬ್ಬರು ತಮ್ಮ ಜಮೀನಿಗೆ ತೆರಳಿದಾಗ ಕೊಳೆತ ಶವದ ವಾಸನೆ ಬಂದಿದೆ. ಬಳಿಕ ಹುಡುಕಾಡಿದಾಗ ಬಾಲಕಿಯ ಮನೆಯಿಂದ 2 ಕಿ.ಮೀ ದೂರದಲ್ಲಿದ್ದ ಕಬ್ಬಿನ ಗದ್ದೆಯಲ್ಲಿ ಶವ ಬಿದ್ದಿರುವುದು ಶುಕ್ರವಾರ ರಾತ್ರಿ ಪತ್ತೆಯಾಗಿತ್ತು.
ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಬಾಲಕಿಯ ತಂದೆ ತರಕಾರಿ ವ್ಯಾಪಾರಿಯಾಗಿದ್ದು, ಅವರಿಗೆ ನಾಲ್ವರು ಮಕ್ಕಳಿದ್ದರು.
ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.