ಮೇದಿನಿನಗರ: ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಸಂಜೆ ಈ ಘಟನೆ ನಡೆದಿದೆ. ವ್ಯಕ್ತಿಯು ಸ್ವಗ್ರಾಮದ ನಿವಾಸಿಯಾಗಿದ್ದು, ಬಾಲಕಿಗೆ ಚಾಕೋಲೇಟ್ ಕೊಡಿಸುವ ನೆಪದಲ್ಲಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೇದಿನಿನಗರ ಪೊಲೀಸ್ ಉಪ– ವಿಭಾಗ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.