ನವದೆಹಲಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯಲ್ಲಿ ಐತಿಹಾಸಿಕ ಪರೇಡ್ ನಡೆಯಿತು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೌರವ ವಂದನೆ ಸ್ವೀಕರಿಸಿದರು.
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರು, ವಿದೇಶಿ ಗಣ್ಯರು ಸೇರಿ ಹಲವರು ಭಾಗವಹಿಸಿದ್ದರು.
16 ರಾಜ್ಯ, 4 ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು.ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.