ಚಂಡೀಗಢ: ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ನಾಮಧಾರಿ ಸಮುದಾಯದ ಎರಡು ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, 8 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿರ್ಸಾ ಜಿಲ್ಲೆಯ ರಾನಿಯಾದಲ್ಲಿ ನಾಮಧಾರಿ ಸಮುದಾಯದ ಎರಡು ಬಣಗಳ ನಡುವೆ ಜಮೀನಿನ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದೆ. ಬಳಿಕ ಎರಡೂ ಗುಂಪುಗಳ ಸದಸ್ಯರು ಗುಂಡು ಹಾರಿಸಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಗ್ರೋಹ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಘರ್ಷಣೆ ಹಿನ್ನೆಲೆಯಲ್ಲಿ ರಾನಿಯಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.