ವಿರುಧುನಗರ (ತಮಿಳುನಾಡು): ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.