ಪಾಲ್ಘರ್: ಗೆಳತಿಯ ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.
‘ಮೊಖಾಡ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯು(8 ವರ್ಷ) ಭಾನುವಾರ ಅದೇ ಗ್ರಾಮದಲ್ಲಿರುವ ತನ್ನ ಗೆಳತಿಯ ಹುಟ್ಟುಹಬ್ಬ ಆಚರಣೆಗೆ ಹೋಗಿದ್ದವಳು ಮನೆಗೆ ವಾಪಸ್ ಬಂದಿರಲಿಲ್ಲ. ಅದೇ ದಿನ ರಾತ್ರಿ ಗ್ರಾಮದ ಸ್ಮಶಾನವೊಂದರ ಬಳಿ ಬಾಲಕಿಯ ಮೃತದೇಹವು ಪತ್ತೆಯಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಬಾಲಕಿಯ ಸಾವಿನ ಬಗ್ಗೆ ತನಿಖೆ ನಡೆಸಿದಾಗ ಮುಖ್ಯ ಪುರಾವೆಗಳು ಲಭಿಸಿದ್ದು, ಅದರ ಆಧಾರದಲ್ಲಿ ಗ್ರಾಮದ ಮಾಜಿ ಮುಖ್ಯಸ್ಥರೊಬ್ಬರ ಮಗನನ್ನು ಮಂಗಳವಾರ ಬಂಧಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘ಆರೋಪಿಯು ಬಾಲಕಿಯನ್ನು ಹಿಂಬಾಲಿಸಿ ಬಳಿಕ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.