ನವದೆಹಲಿ: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ 93 ವರ್ಷದ ವ್ಯಕ್ತಿಯೊಬ್ಬರು ಈ ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ.
ಕಂಕೇರ್ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಶುಕ್ಲಾ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗಿದೆ. ಇದೇ ವೇಳೆ ಮತದಾರರ ಪಟ್ಟಿಗೆ ಶೇರ್ ಸಿಂಗ್ ಹೆಸರನ್ನು ಸೇರ್ಪಡೆ ಮಾಡಲಾಗಿದೆ.
ಭಾನುಪ್ರತಾಪುರ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಭೈಂಸಕನಹರ್ (ಕೆ) ಗ್ರಾಮದ ನಿವಾಸಿ ಶೇರ್ ಸಿಂಗ್ ಹೆಡ್ಕೊ (93) ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ಹಲವು ವರ್ಷಗಳು ಕಳೆದರೂ ಅವರ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿರಲಿಲ್ಲ. ಇದಕ್ಕೆ ದಾಖಲೆಗಳ ಸಮಸ್ಯೆಯೂ ಕಾರಣ ಎಂದು ಹೇಳಲಾಗಿದೆ.
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮೊದಲ ಬಾರಿ ಮತದಾನ ಮಾಡಲು ಶೇರ್ ಸಿಂಗ್ ತುಂಬಾ ಉತ್ಸುಕರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.