ನವದೆಹಲಿ: ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ 2022ರಲ್ಲಿ ದಾಖಲಾದ ಒಟ್ಟು ಪ್ರಕರಣಗಳಲ್ಲಿ, ಶೇ 97.7ರಷ್ಟು ಪ್ರಕರಣಗಳು 13 ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶದಲ್ಲಿ ವರದಿಯಾಗಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಇವೆ ಎಂದು ವರದಿಯಲ್ಲಿ ಹೇಳಲಾಗಿದೆ.
2022ರಲ್ಲಿ, ಪರಿಶಿಷ್ಟ ಪಂಗಡಗಳ(ಎಸ್‌ಟಿ) ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು 13 ರಾಜ್ಯಗಳಲ್ಲಿಯೇ ಹೆಚ್ಚು (ಶೇ98.91) ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.