ಹೈದರಾಬಾದ್: ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರನ್ನು ದೆವ್ವ ಎಂದು ಕರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ಟೀನ್ ಜತೆ ನಿಲ್ಲುವಂತೆ ಓವೈಸಿ ಒತ್ತಾಯಿಸಿದ್ದಾರೆ.
ಪ್ಯಾಲೆಸ್ಟೀನ್ ಕೇವಲ ಮುಸ್ಲಿಮರ ವಿಷಯವಾಗಿಲ್ಲ, ಮಾನವೀಯ ಸಮಸ್ಯೆಯಾಗಿದೆ, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನರಿಗೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ಯಾಲೆಸ್ಟೀನ್‌ನಲ್ಲಿ ಸುಮಾರ ಹತ್ತು ಲಕ್ಷ ಜನರು ಸೂರು ಕಳೆದುಕೊಂಡು ಅಲೆದಾಡುತ್ತಿದ್ದಾರೆ, ಸಾವಿರಾರು ಜನರು ಗಾಯಾಳುಗಳಾಗಿದ್ದಾರೆ ಅವರಿಗೆ ಮೋದಿ ಸ್ಪಂದಿಸಬೇಕು ಎಂದರು.
ಪ್ಯಾಲೆಸ್ಟೀನ್ ಬೆಂಬಲಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿಕೆ ಬಗ್ಗೆ ಓವೈಸಿ ಕಿಡಿಕಾರಿದರು.
ಮುಖ್ಯಮಂತ್ರಿಗಳೇ, ನಾನು ಹೆಮ್ಮೆಯಿಂದ ಪ್ಯಾಲೆಸ್ಟೀನ್ ಮತ್ತು ನಮ್ಮ ತ್ರಿವರ್ಣ ಧ್ವಜವನ್ನು ಧರಿಸುತ್ತಿದ್ದೇನೆ. ನಾನು ಅಲ್ಲಿನ ಜನರ ಪರವಾಗಿ ನಿಲ್ಲುತ್ತೇನೆ, ನೀವು ಎಷ್ಟು ಪ್ರಕರಣಗಳನ್ನು ಬೇಕಾದರೂ ದಾಖಲಿಸಬಹುದು ಎಂದರು ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.