ADVERTISEMENT

ಅಮೀರ್ ಖಾನ್ ಡೀಪ್‌ಫೇಕ್ ವಿಡಿಯೊ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್

ಪಿಟಿಐ
Published 18 ಏಪ್ರಿಲ್ 2024, 2:56 IST
Last Updated 18 ಏಪ್ರಿಲ್ 2024, 2:56 IST
<div class="paragraphs"><p>ನಟ ಅಮೀರ್ ಖಾನ್</p></div>

ನಟ ಅಮೀರ್ ಖಾನ್

   

(ಪಿಟಿಐ ಚಿತ್ರ)

ಮುಂಬೈ: ನಟ ಅಮೀರ್ ಖಾನ್ ಅವರು ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಡೀಪ್‌ಫೇಕ್ ವಿಡಿಯೊಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಾಹಿತಿ ತಂತ್ರಜ್ಞಾನ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಆಮೀರ್‌ ಪರ ವಕ್ತಾರರು, 'ಕೃತಕ ಬುದ್ಧಿಮತ್ತೆ (AI) ಬಳಸಿ 27 ಸೆಕೆಂಡ್‌ಗಳ ವಿಡಿಯೊ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ' ಎಂದು ಅವರು ಸ್ಪಷ್ಟಪಡಿಸಲು ಬಯಸುತ್ತಾರೆ ಎಂದು ಹೇಳಿದ್ದಾರೆ.

'ತಮ್ಮ 35 ವರ್ಷಗಳ ಚಿತ್ರರಂಗದ ವೃತ್ತಿ ಜೀವನದಲ್ಲಿ ಆಮೀರ್‌ ಖಾನ್‌ ಯಾವುದೇ ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡಿಲ್ಲ. ಹಿಂದಿನ ಹಲವು ಚುನಾವಣೆಗಳಲ್ಲಿ ಅವರು ಚುನಾವಣಾ ಆಯೋಗದ ಪರವಾಗಿ ಸಾರ್ವಜನಿಕ ಜಾಗೃತಿ ಅಭಿಯಾನಗಳ ಮೂಲಕ ಜಾಗೃತಿ ಮೂಡಿಸಿದ್ದರು' ಎಂದು ಖಾನ್ ಪರ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.