ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬಿಜೆಪಿ ಕಚೇರಿ ಹತ್ತಿರದ ರಸ್ತೆಗಳಿಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪ್ರಧಾನ ಕಚೇರಿಗೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸೆಂಟ್ರಲ್ ದೆಹಲಿ ಸುತ್ತಮುತ್ತ ಓಡಾಟವನ್ನು ತಪ್ಪಿಸಿ ಎಂದು ಸಾರ್ವಜನಿಕರಿಗೆ ಪೊಲಿಸರು ಮನವಿ ಮಾಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಲಿದ್ದು, ದೆಹಲಿಯ ಎಲ್ಲಾ ಶಾಸಕರು ಮತ್ತು ಕೌನ್ಸಿಲರ್‌ಗಳಿಗೆ ಬಿಜೆಪಿ ಪ್ರಧಾನ ಕಚೇರಿಯ ಬಳಿ ಸಮಾವೇಶಗೊಳ್ಳಲು ಸೂಚಿಸಲಾಗಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.
ನೆರೆಯ ರಾಜ್ಯಗಳಿಂದ ಎಎಪಿ ಕಾರ್ಯಕರ್ತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ದೆಹಲಿಯ ಗಡಿಗಳಲ್ಲಿ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.