ADVERTISEMENT

ಎಎಪಿ–ಕಾಂಗ್ರೆಸ್ ಮೈತ್ರಿ ಕೇಜ್ರಿವಾಲ್ ಜೈಲಿಂದ ಬಂದ ಬಳಿಕ ತೀರ್ಮಾನ: ಸಿಸೋಡಿಯಾ

ಪಿಟಿಐ
Published 16 ಆಗಸ್ಟ್ 2024, 13:57 IST
Last Updated 16 ಆಗಸ್ಟ್ 2024, 13:57 IST
<div class="paragraphs"><p>ಮನೀಶ್ ಸಿಸೋಡಿಯಾ</p></div>

ಮನೀಶ್ ಸಿಸೋಡಿಯಾ

   

–ಪಿಟಿಐ ಚಿತ್ರ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಬಂದ ಬಳಿಕ ತೀರ್ಮಾನಿಸಲಾಗುವುದು ಎಂದು ಎಎಪಿಯ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ADVERTISEMENT

ಪಿಟಿಐ ಸಂಪಾದಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

‘ಇಂಡಿಯಾ ಒಕ್ಕೂಟವಾಗಿದ್ದ ಎಎಪಿಯು ಇತ್ತೀಚೆಗೆ ನಡೆದ ಲೋಕಸಭೆಯಲ್ಲಿ ಬಿಜೆಪಿಯನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ ವಿಧಾನಸಭೆ ಚುನಾವಣೆಯೇ ಬೇರೆ’ ಎಂದು ಹೇಳಿದ್ದಾರೆ.

‘ಅರವಿಂದ ಕೇಜ್ರಿವಾಲ್ ಅವರು ಈಗಲೂ ಜೈಲಿನಲ್ಲಿದ್ದಾರೆ. ಅವರು ಶೀಘ್ರವೇ ಹೊರಬರಲಿದ್ದಾರೆ. ಬಳಿಕ ಈ ಪ್ರಶ್ನೆ ಕೇಳಿ ಅವರಿಂದ ಉತ್ತರ ಪಡೆದುಕೊಳ್ಳಬಹುದು’ ಎಂದು ಹೇಳಿದ್ದಾರೆ. ಅಲ್ಲದೆ ಹರಿಯಾಣ ಚುನಾವಣೆಯಲ್ಲಿ ಮೈತ್ರಿಯ ಬಗ್ಗೆಯೂ ಕೇಜ್ರಿವಾಲ್ ಅವರೇ ನಿರ್ಧರಿಸಲಿದ್ದಾರೆ ಎಂದಿದ್ದಾರೆ.

ಪ್ರತಿ ಚುನಾವಣೆಯಲ್ಲಿಯೂ ಸವಾಲುಗಳಿರುತ್ತವೆ. ಈ ಬಾರಿಯ ದೆಹಲಿ ಚುನಾವಣೆಯಲ್ಲೂ ನಮಗೆ ಸವಾಲುಗಳಿವೆ. ಅದಕ್ಕೆ ನಾವು ಉತ್ತರಿಸಲಿದ್ದೇವೆ’ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿದೆ. ನಾನು ಕೇಜ್ರಿವಾಲ್ ಅವರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಭವಿಷ್ಯದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರೂ ಜೈಲಿಗೆ ಹೋಗಬಹುದು. ಹೇಮಂತ್ ಸೊರೇನ್ ಅವರು ಜೈಲಿಗೆ ಹೋದರು. ಪವಾರ್ ಅವರ ಪಕ್ಷವನ್ನೇ ಒಡೆಯಲಾಯಿತು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.