ನವದೆಹಲಿ: ಚಂಡೀಗಢ ನಗರಪಾಲಿಕೆ ಮೇಯರ್ ಚುನಾವಣಾ ಫಲಿತಾಂಶಕ್ಕೆ ತಡೆ ನೀಡಲು ನಿರಾಕರಿಸಿದ ಪಂಜಾಬ್–ಹರಿಯಾಣ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಎಎಪಿ ಕೌನ್ಸಿಲರ್ ಕುಲದೀಪ್ ಕುಮಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬುಧವಾರ ತಡೆ ನೀಡಲು ನಿರಾಕರಿಸಿದ್ದ ಹೈಕೋರ್ಟ್, ವಿಚಾರಣೆಯನ್ನು ಮೂರು ವಾರ ಮುಂದೂಡಿತ್ತು. ಮೇಯರ್ ಸ್ಥಾನದ ಚುನಾವಣೆಯಲ್ಲಿ 16 ಮತ ಪಡೆದಿದ್ದ ಬಿಜೆಪಿಯ ಮನೋಜ್ ಸೋನ್‌ಕರ್ ಗೆದ್ದಿದ್ದರು. ಕಾಂಗ್ರೆಸ್–ಎಎಪಿ ಅಭ್ಯರ್ಥಿ ಕುಮಾರ್ 12 ಮತ ಗಳಿಸಿ ಸೋತಿದ್ದರು. 8 ಮತಗಳು ತಿರಸ್ಕೃತಗೊಂಡಿದ್ದವು.
‘ಪಕ್ಷಗಳು ನೇಮಿಸಿದ್ದ ಸದಸ್ಯರಿಗೆ ಮತ ಎಣಿಕೆ ಪ್ರಕ್ರಿಯೆಯನ್ನು ಗಮನಿಸಿಕೊಳ್ಳಲು ಚುನಾವಣಾಧಿಕಾರಿ ಅವಕಾಶ ನೀಡಿರಲಿಲ್ಲ. ಈಗ ಹೈಕೋರ್ಟ್ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ಹೊಸದಾಗಿ, ನ್ಯಾಯಯುತವಾಗಿ ಚುನಾವಣೆ ನಡೆಸಬೇಕು’ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.