ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆರು ವಾರಗಳ ಕಾಲ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯ ಕಾರಣ ಅವರಿಗೆ ಜಾಮೀನು ನೀಡಲಾಗಿದೆ. ಅನುಮತಿ ಇಲ್ಲದೆ ದೆಹಲಿಯಿಂದ ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಗುರುವಾರ ಅವರು ತಿಹಾರ್ ಜೈಲಿನ ಸ್ನಾನಗೃಹದಲ್ಲಿ ತಲೆ ತಿರುಗಿ ಬಿದ್ದಿದ್ದರು. ಅವರನ್ನು ಇಲ್ಲಿನ ಲೋಕನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.